ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಸಚಿವ ಬಿ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಸಚಿವ ರಾಜೀನಾಮೆ ನೀಡಬೇಕೆಂಬ ಆಗ್ರಹ ಬಿಜೆಪಿ ನಾಯಕರಿಂದ ಹೆಚ್ಚಾಗುತ್ತಿರುವ ಹೊತ್ತಿನಲ್ಲಿ, ಸಚಿವ ನಾಗೇಂದ್ರ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ರಾಜೀನಾಮೆ ನೀಡಿದ್ದಾರೆ.
ಅಭಿವೃದ್ಧಿ ನಿಗಮದ ಅವ್ಯವಹಾರದ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ತನಿಖೆಯ ವರದಿಯನ್ನು ಆಧರಿಸಿ ನಿರ್ಧರಿಸುತ್ತೇವೆ. ಎಸ್ ಐಟಿ ತ್ವರಿತವಾಗಿ ತನಿಖೆ ಮಾಡುತ್ತಿದ್ದು ಶೀಘ್ರವೇ ವರದಿ ನೀಡಲಿದೆ ಎಂದು ಇಂದು ಬೆಂಗಳೂರಿನಲ್ಲಿ ಸಿಎಂ ಹೇಳಿದ್ದರು.