Friday, June 14, 2024

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಬಂಧನ

Must read

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ  ಕೊಲೆಗೆ ನಟ ದರ್ಶನ್‌ ಸೂಚನೆ ನೀಡಿದ್ದರು ಎನ್ನಲಾಗಿದೆ. ದರ್ಶನ್‌ ಸೇರಿದಂತೆ 10 ಮಂದಿಯನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ.

ಏನಿದು ಪ್ರಕರಣ?: ನಟ ದರ್ಶನ್‌ ಅವರಿಗೆ ಆತ್ಮೀಯವಾಗಿರುವ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ  ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದ. ಇದಲ್ಲದೆ ಕೆಟ್ಟದಾಗಿ ಮೆಸೇಜ್‌ ಮಾಡುತ್ತಿದ್ದ ಎನ್ನಲಾಗಿದೆ.

ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಕರೆಯಲಾಗಿತ್ತು. ಜೂ. 8ರಂದು ರಾತ್ರಿ ವಿನಯ್‌ ಎನ್ನುವವರ ಶೆಡ್‌ ಗೆ ಕರೆತಂದು ಬಲವಾಧ ಆಯುಧದಿಂದ ರೇಣುಕಾ ಅವರಿಗೆ ಹೊಡೆದು ಕೊಲೆಗೈದು, ಮೃತದೇಹನ್ನು ಮೋರಿಗೆ ಎಸೆಯಲಾಗಿತ್ತು. ಘಟನೆ ಸಂದರ್ಭದಲ್ಲಿ ದರ್ಶನ್‌ ಅವರು ಸ್ಥಳದಲ್ಲೇ ಇದ್ದರು ಎನ್ನಲಾಗಿದೆ.

ಪೊಲೀಸರಿಗೆ ಮೃತದೇಹ ಸಿಕ್ಕಾಗ ತನಿಖೆ ಶುರುವಾಗಿದೆ. ಈ ಪ್ರಕರಣದಲ್ಲಿ ಮೂವರು ಮೊದಲು ಠಾಣೆಗೆ ಬಂದು ನಾವೇ ಕೊಲೆ ಮಾಡಿದ್ದು, ಹಣಕಾಸಿನ ವಿಚಾರದಲ್ಲಿ ಈ ಕೊಲೆಯನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ. ಆದರೆ ಪೊಲೀಸರಿಗೆ ಈ ಬಗ್ಗೆ ಸಂಶಯ ಉಂಟಾಗಿದೆ. ಮತ್ತಷ್ಟು ಆಳವಾಗಿ ತನಿಖೆಗೆ ಇಳಿದಾಗ ಹಿಂದಿನ ಕಾರಣ ತಿಳಿದು ಬಂದಿದೆ.

ಮೈಸೂರಿನ ಕಾಮಾಕ್ಷಿ ಪಾಳ್ಯದ ಶೆಡ್‌ ವೊಂದರಲ್ಲಿ ರೇಣುಕಾ ಸ್ವಾಮಿ ಅವರ ಕೊಲೆಯಾಗಿತ್ತು. ಮೊದಲಿಗೆ ಇದೊಂದು ಆತ್ಮಹತ್ಯೆ ಪ್ರಕರಣವೆನ್ನಲಾಗಿತ್ತು. ಆದರೆ ತನಿಖೆಯ ಬಳಿಕ ಇದೊಂದು ಕೊಲೆ ಎನ್ನುವುದು ಗೊತ್ತಾಗಿದೆ.

spot_img

More articles

LEAVE A REPLY

Please enter your comment!
Please enter your name here