Friday, October 18, 2024

ನಾಳೆ (ಜುಲೈ 6) ಬ್ರಹ್ಮಾವರ, ಕುಂದಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Must read

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಹಾಗೂ ಕುಂದಾಪುರ ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ಬ್ರಹ್ಮಾವರ ಹಾಗೂ ಕುಂದಾಪುರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 6) ರಜೆ ಘೋಷಿಸಿ ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಆದೇಶ ನೀಡಿದ್ದಾರೆ.

ಭಾರೀ ಗಾಳಿಮಳೆಗೆ ಮೂರು ತಾಲೂಕಿನಾದ್ಯಂತ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮಳೆ ಮುಂದುವರಿಯುವ ಸಾಧ್ಯತೆ ಇರುವ ಕಾರಣ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

spot_img

More articles

LEAVE A REPLY

Please enter your comment!
Please enter your name here