Saturday, December 28, 2024

ಉದ್ಯಾವರ; ರುದ್ರಭೂಮಿಯಲ್ಲಿ ಆತ್ಮಹತ್ಯೆಗೆ ಶರಣಾದ ಟೆಂಪೋ ಮಾಲೀಕ

Must read

ಉಡುಪಿ: ಉದ್ಯಾವರ ಬೋಳಾರ್ ಗುಡ್ಡೆಯ ಟೆಂಪೋ ಮಾಲೀಕ ಮಹೇಶ್ ಪಾಲನ್ (35) ಅವರು ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮದಾಸ್ ಪಾಲನ್ ಪುತ್ರನಾಗಿರುವ ಮಹೇಶ್ (ಮಾಹಿ), ಇಂದು ಬೆಳಿಗ್ಗೆ ಪುತ್ರಿಯನ್ನು ಶಾಲೆಗೆ ಬಿಟ್ಟು ಬಂದಿದ್ದರು. ಬಳಿಕ ಮನೆ ಸಮೀಪದಲ್ಲಿರುವ ಕಟ್ಟಿಗೆ ತುಂಬಿರುವ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಲ್ಲವ ಮಹಾಜನ ಸಂಘ, ಉದ್ಯಾವರ ಯುವಕ ಮಂಡಲ ಮತ್ತು ಗುಡ್ಡೆಯಂಗಡಿ ಫ್ರೆಂಡ್ಸ್ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ತಂದೆ ಆ್ಯಂಬುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮೃತ ಮಹೇಶ್ ಅವರು ತಂದೆ- ತಾಯಿ, ಇಬ್ಬರು ಸಹೋದರರು, ಪತ್ನಿ, ಪುತ್ರಿ ಸಹಿತ ಬಂದು ಬಳಗದವರನ್ನು ಅಗಲಿದ್ದಾರೆ.

spot_img

More articles

LEAVE A REPLY

Please enter your comment!
Please enter your name here