Friday, September 20, 2024

ಮಣಿಪಾಲ: ಡಿವೈಡರ್ ಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಕಾರು; ಪವಾಡ ಸದೃಶವಾಗಿ ಪಾರಾದ ಮಗು

Must read

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಪರ್ಕಳ ಹೈಸ್ಕೂಲ್ ಬಳಿ‌ ಇಂದು ಸಂಜೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮಗು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದೆ.

ಮಣಿಪಾಲದಿಂದ ಆತ್ರಾಡಿಗೆ ತೆರಳುತ್ತಿದ್ದ ಲ್ಯಾಂಡ್ ರೋವರ್ ಕಾರು, ಪರ್ಕಳ ಹೈಸ್ಕೂಲ್ ಬಳಿ ತಲುಪುತ್ತಿದ್ದಂತೆ ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ಡಿವೈಡರ್ ಮೇಲಿದ್ದ ವಿದ್ಯುತ್ ಕಂಬ ಉರುಳಿಬಿದ್ದಿದ್ದು, ತಡೆಬೇಲಿ ಕಿತ್ತುಹೋಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

spot_img

More articles

LEAVE A REPLY

Please enter your comment!
Please enter your name here