Sunday, September 8, 2024

ಪರಶುರಾಮ ಥೀಂ ಪಾರ್ಕ್ ಅಕ್ರಮ: ನಿರ್ಮಿತಿ ಕೇಂದ್ರ ನಿರ್ದೇಶಕ ಅರುಣ್ ಕುಮಾರ್ ಸಸ್ಪೆಂಡ್

Must read

ಉಡುಪಿ: ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ನಿರ್ದೇಶಕರಾದ ಅರುಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಅನುಷ್ಠಾನ ಅಧಿಕಾರಿಯಾಗಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ನಿರ್ಮಿಸಿದ್ದು, ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105 ಲಕ್ಷಕ್ಕೆ ಆಡಳಿತ್ಮಾತಕ ಮಂಜೂರಾತಿಗೊಂಡಿದೆ. ಈ ಪೈಕಿ ರೂ.672.ಲಕ್ಷ ಅನುದಾನ ಈಗಾಗಲೇ ಬಿಡುಗಡೆಯಾಗಿ, ಸದ್ರಿ ಕಾಮಗಾರಿ ಪೂರ್ಣಗೊಳಿಸದೇ, ಸಂಬಂದಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ ಉದ್ಘಾಟನಾ ಕಾರ್ಯಕ್ರಮವನ್ನು ಮಾಡಿರುವುದರಿಂದ ನಿರ್ಮಾಣದ ಗುಣಮಟ್ಟದ ಬಗ್ಗೆ ಮತ್ತು ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ, ಪರವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ನಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ವಿಚಾರಣಾ ಆಯೋಗದಲ್ಲಿ ತನಿಖಾ ಹಂತದಲ್ಲಿದೆ.

ಉಚ್ಚನ್ಯಾಯಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ತನಿಖೆಗೆ ಅಡ್ಡಿ ಉಂಟು ಮಾಡುವ ಅಥವಾ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಸಾಧ್ಯತೆಗಳಿರುವುದರಿಂದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿಟ್ಟು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಇವರ ಸ್ಥಾನಕ್ಕೆ ದಿವಾಕರ ಪಿ. ಸಹಾಯಕ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಇವರನ್ನು ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಹುದ್ದೆಗೆ ಹೆಚ್ಚುವರಿ ಪ್ರಭಾರ ಆದೇಶ ನೀಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here