ಕುಂದಾಪುರ, ಬೈಂದೂರು: ಶಾಲಾ ಪರಿಸ್ಥಿತಿಗೆ ಅನುಗುಣವಾಗಿ ರಜೆ ನಿರ್ಧರಿಸಲು ಮುಖ್ಯ ಶಿಕ್ಷಕರಿಗೆ ಸೂಚನೆ
ಉಡುಪಿ: ಹೆಬ್ರಿ ತಾಲೂಕಿನಲ್ಲಿ ಭಾರೀ ಮಳೆ ಹಾಗೂ ಗಾಳಿಯಾಗುತ್ತಿರುವ ಹಿನ್ನಲೆಯಲ್ಲಿ ತಾಲೂಕಿನ ಅಂಗನವಾಡಿ , ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 26 ರಂದು ರಜೆ ಘೋಷಣೆ ಮಾಡಿ ತಹಶೀಲ್ದಾರ್ ಎಸ್ ಎ ಪ್ರಸಾದ್ ಆದೇಶ ನೀಡಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು, ಗಾಳಿ ಮಳೆಯಿಂದ ತರಗತಿ ನಡೆಸಲು ಅನಾನುಕೂಲವಾಗುತ್ತಿದ್ದಲ್ಲಿ ಅಥವಾ ಮಳೆ ಜೋರಾಗಿದ್ದಲ್ಲಿ ಮುಖ್ಯ ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ಮತ್ತು ಶಾಲಾ ಪರಿಸ್ಥಿತಿ ನೋಡಿಕೊಂಡು ರಜೆ ನೀಡಲ ಬಿಇಒಗಳಿಗೆ ಕುಂದಾಪುರ ಹಾಗೂ ಬೈಂದೂರಿನ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.