ಮಂಡ್ಯ: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಬಾಕಿ ಕಂತು ಇಂದಿನಿಂದಲೇ (ಆ.6) ಗೃಹಿಣಿಯರ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮಂಡ್ಯ ನಗರದಲ್ಲಿ ಇಂದು ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಜೂನ್ ಮತ್ತು ಜುಲೈ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಹಣ ಖಾತೆಗೆ ಜಮೆ ಆಗಲಿದೆ ಎಂದರು.
ಜನರಿಗೆ ನೀಡಲಾಗಿರುವ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಕೆಲವು ತಾಂತ್ರಿಕ ಕಾರಣದಿಂದ ಎರಡು ತಿಂಗಳ ಹಣ ಬಿಡುಗಡೆ ಆಗಿರಲಿಲ್ಲ. ಮಹಿಳೆಯರು ಇನ್ನು ಮುಂದೆ ಆತಂಕಪಡುವ ಅಗತ್ಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.