Friday, September 13, 2024

ಮಣಿಪಾಲ: ನಿಯಂತ್ರಣ ತಪ್ಪಿ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ ಎರಡು ಕಾರು; ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರು

Must read

ಮಣಿಪಾಲ (ದಿನನಿತ್ಯ ವರದಿ): ಚಾಲಕನ ನಿಯಂತ್ರಣ ತಪ್ಪಿದ ರಿಡ್ಜ್ ಕಾರೊಂದು ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಈಶ್ವರನಗರದಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಎರಡು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಣಿಪಾಲದಿಂದ ಬಂದ ಶಿಫ್ಟ್ ಕಾರು ಚಾಲಕನು ಗರೋಡಿ ರಸ್ತೆಯ ತೆರಳುವ ಸಲುವಾಗಿ ಒಮ್ಮೇಲೆ ಎಡಕ್ಕೆ ತಿರುಗಿದ್ದಾನೆ. ಈ ವೇಳೆ ಹಿಂದಿನಿಂದ ಅತೀ ವೇಗದಲ್ಲಿ ಬರುತ್ತಿದ್ದ ರಿಡ್ಜ್ ಕಾರು ಚಾಲಕನು ನಿಯಂತ್ರಣ ಕಳೆದುಕೊಂಡ ಪರಿಣಾಮ ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದು, ಬಳಿಕ ಅಲ್ಲೇ ಇದ್ದ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಗುದ್ದಿದ್ದಾನೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದಿವೆ. ಇದರ ಪರಿಣಾಮ ಎರಡು ಕಾರುಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಹಾನಿ ಸಂಭವಿಸಿದೆ.

ಈಶ್ವರ್ ನಗರದಲ್ಲಿ ‘ತುರ್ತು ಕಾಮಗಾರಿ ಪ್ರಗತಿಯಲ್ಲಿದೆ ನಿಧಾನವಾಗಿ ಚಲಿಸಿ’ ಎಂಬ ಬೋರ್ಡ್ ಹಾಕಲಾಗಿದೆ. ಆದರೂ ವಾಹನಗಳ ವೇಗ ಮಾತ್ರ ನಿಂತಿಲ್ಲ‌. ಈಗಾಗಲೇ ಇಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ

spot_img

More articles

LEAVE A REPLY

Please enter your comment!
Please enter your name here