Friday, September 13, 2024

ಎಸ್ ಡಿಪಿಐ ಬೆಂಬಲಿತ ಕಾಪು ಪುರಸಭಾ ಸದಸ್ಯೆ ಸರಿತಾ ಬಿಜೆಪಿ ಸೇರ್ಪಡೆ

Must read

ಉಡುಪಿ: ಕೇಂದ್ರ ಸರ್ಕಾರದ ಜನಪರ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಎಸ್.ಡಿ.ಪಿ.ಐ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಬೆಂಬಲಿತ ಕಾಪು ಪುರಸಭಾ ಸದಸ್ಯೆ ಸರಿತಾ ಹಾಗೂ ಅವರ ಪತಿ ಶಿವಾನಂದ್ ಅವರು ಇಂದು ಬಿಜೆಪಿ‌ ಪಕ್ಷಕ್ಕೆ ಸೇರ್ಪಡೆಯಾದರು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಅವರು ಬಿಜೆಪಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕೋಶಾಧಿಕಾರಿ ಮನೋಹರ್ ಕಲ್ಮಾಡಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಜಿಲ್ಲಾ ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಪುರಸಭೆಯ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here