Tuesday, October 8, 2024

ಮಣಿಪಾಲ: ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿಯ ಬಂಧನ

Must read

ಉಡುಪಿ: ಅನಂತನಗರದ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಅಕ್ರಮ ಪ್ರವೇಶಿಸಿ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಇಂದ್ರಾಳಿ ರೈಲ್ವೆ ನಿಲ್ದಾಣ ಬಳಿ ನಿವಾಸಿ ನವೀನ್ ನಾಯ್ಕ್ (25) ಎಂದು ಗುರುತಿಸಲಾಗಿದೆ. ಈತ ಸೆ.1ರಂದು ನಸುಕಿನ ವೇಳೆ ವಸತಿ ನಿಲಯದ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಬಳಿಕ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಯೊಬ್ಬಳ ಕೈ ಎಳೆದು ಕಿರುಕುಳ ನೀಡಿ ಪರಾರಿಯಾಗಿದ್ದನು.

ಈ ಬಗ್ಗೆ ವಸತಿ ನಿಲಯದ ವಾರ್ಡನ್ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

spot_img

More articles

LEAVE A REPLY

Please enter your comment!
Please enter your name here