Tuesday, October 8, 2024

ದಿಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಘೋಷಣೆ

Must read

ಹೊಸದಿಲ್ಲಿ: ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ಅವರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಇಂದು ದಿಲ್ಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಮಹತ್ವದ ಘೋಷಣೆಯನ್ನು ಕೇಜ್ರಿವಾಲ್ ಮಾಡಿದ್ದಾರೆ.

ಎರಡು ದಿನಗಳ ನಂತರ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ಜನರು ತೀರ್ಪು ಪ್ರಕಟಿಸುವವರೆಗೂ ನಾನು ಆ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ದಿಲ್ಲಿಯಲ್ಲಿ ಚುನಾವಣೆಗೆ ತಿಂಗಳುಗಳು ಬಾಕಿ ಇವೆ, ನನಗೆ ನ್ಯಾಯಾಲಯದಿಂದ ನ್ಯಾಯ ಸಿಕ್ಕಿದೆ. ಈಗ ನನಗೆ ಜನತಾ ನ್ಯಾಯಾಲಯದಿಂದ ನ್ಯಾಯ ಸಿಗುತ್ತದೆ. ಜನರ ಆದೇಶದ ನಂತರವೇ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

spot_img

More articles

LEAVE A REPLY

Please enter your comment!
Please enter your name here