Friday, September 20, 2024

ತೆಕ್ಕಟ್ಟೆ: ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದ ಶಾಲಾ ವಾಹನ: ಚಾಲಕನಿಗೆ ಗಂಭೀರ ಗಾಯ

Must read

ಉಡುಪಿ: ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ‌ ನಿಯಂತ್ರಣ ತಪ್ಪಿ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತೆಕ್ಕಟ್ಟೆ ರಾ.ಹೆ.66ರ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.

ಬ್ರಹ್ಮಾವರದಿಂದ ಹೆಮ್ಮಾಡಿ ಕಡೆಗೆ ಚಾಲಕ ಸಹಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದರು. ಈ ವೇಳೆ ಶಾಲಾ ವಾಹನಕ್ಕೆ ದ್ವಿಚಕ್ರ ವಾಹನವೊಂದು ಏಕಾಏಕಿ ಅಡ್ಡಬಂದ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯ ತೀವ್ರತೆಗೆ ಚಾಲಕನ ತಲೆ, ಕಣ್ಣು ಹಾಗೂ ಕೈಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ತತ್‌ಕ್ಷಣವೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here