Friday, October 18, 2024

ಕಾರ್ಕಳ: ಮೀನಿ‌ ಲಾರಿ- ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು

Must read

ಉಡುಪಿ: ಮೀನಿ‌ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ಬೈಕಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಸುರೇಶ್ ಆಚಾರ್ಯ (36), ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಎಂದು ಗುರುತಿಸಲಾಗಿದೆ. ಮೀನಾಕ್ಷಿ ಆಚಾರ್ಯ (32) ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

spot_img

More articles

LEAVE A REPLY

Please enter your comment!
Please enter your name here