Friday, November 22, 2024

ಕಟಪಾಡಿ – ಶಿರ್ವ ರಸ್ತೆ ದುರಸ್ತಿಗೆ 13 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆ; ಶಾಸಕ ಗುರ್ಮೆ ಸುರೇಶ್ ಶೆಟ್ಟಿ

Must read

ಉಡುಪಿ: ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವ್ರ ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.

ಕೇಂದ್ರ ಸರಕಾರಕ್ಕೆ ಸಿಆರ್ ಎಫ್ ನಿಧಿಯ 6 ಕೋಟಿ ರೂಪಾಯಿ ಮತ್ತು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಗೆ 7 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ‌ ಸಲ್ಲಿಸಲಾಗಿದೆ.

ಮಳೆಯ ಕಾರಣಕ್ಕೆ ತೀರಾ ಹದಗೆಟ್ಟು ಹೋಗಿದ್ದ ರಸ್ತೆಯನ್ನು ನಾಲ್ಕೈದು ಬಾರಿ ರಿಪೇರಿ ಮಾಡಿಸಲಾಗಿತ್ತು. ಕೇಂದ್ರ ಸರಕಾರದ ಸಿ.ಆರ್.ಎಫ್ (CRF) ನಿಧಿಯಿಂದ ದ 6 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ 7 ಕೋಟಿ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮೋದನೆ ಬಾಕಿ ಇದೆ. ಕೂಡಲೇ ರಸ್ತೆ ಮರು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here