ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಎಸ್ ಟಿ ಮೋರ್ಚಾದ ವತಿಯಿಂದ ಅಧ್ಯಕ್ಷೆ ಸುಮಲತಾ ಇವರ ನೇತೃತ್ವದಲ್ಲಿ ಉಡುಪಿ ಇಂದ್ರಾಳಿ ವಾರ್ಡಿನ ಮಂಚಿ ಕುಮೇರಿಯಲ್ಲಿ ಮಕ್ಕಳೊಂದಿಗೆ ದೀಪಾವಳಿ ಆಚರಣೆಯನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿಯ ಶಾಸಕರಾದ ಯಶ್ ಪಾಲ್ ಸುವರ್ಣ ಅವರು ದೀಪಾವಳಿಯನ್ನು ಮಕ್ಕಳ ಜೊತೆ ಮಕ್ಕಳಾಗಿ ಸಂಭ್ರಮಿಸಿ ಆಚರಿಸಿದಾಗ ಈ ಹಬ್ಬದ ಆಚರಣೆಗೆ ವಿಶೇಷವಾದ ಮೆರುಗು ಮೂಡುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ದೀಪವನ್ನು ಹಚ್ಚಿ ಸೇರಿದಂತಹ ಎಲ್ಲಾ ವ್ಯಕ್ತಿಗಳು ದೀಪದ ಬೆಳಕಿನಲ್ಲಿ ಮಕ್ಕಳಿಗೆ ಸಿಹಿ ತಿಂಡಿಯ ವಿತರಣೆ, ಗಿಫ್ಟ್ ಪ್ಯಾಕ್, ಸಿಡಿಮದ್ದುಗಳನ್ನು ಬಿಟ್ಟು ಮಕ್ಕಳೊಂದಿಗೆ ಸಂಭ್ರಮಿಸಿದರು. ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ನಗರ ಸಭೆಯ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ನಗರ ಸಭಾ ಸದಸ್ಯರಾದ ಅಶೋಕ್ ನಾಯ್ಕ್, ಬಿಜೆಪಿಯ ಹಿರಿಯರಾದ ಲೋಕಯ್ಯ, ಜಿಲ್ಲಾ ಮಹಿಳಾ ಮೋರ್ಚಾದ ನಿಕಟಪೂರ್ವ ಅಧ್ಯಕ್ಷರಾದ ವೀಣಾ ಎಸ್ ಶೆಟ್ಟಿ, ನಗರ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ರಶ್ಮಿತ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಸುಜಲ ಸತೀಶ್, ಎಸ್ ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುಗುಣ ನಾಯ್ಕ್, ನಗರ ಮಹಿಳಾ ಮೋರ್ಚಾದ ಪದಾಧಿಕಾರಿ ಚಂದ್ರಿಕಾ, ರೂಪ ಶೆಣೈ ,ಜಯಶ್ರೀ ಮೊದಲಾದವರು ಉಪಸ್ಥಿತರಿದ್ದರು.