ಉಪ್ಪಿನಂಗಡಿ: ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ.
ಮಂಗಳೂರಿನ ವೆಸ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆ, ನ.5ರಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ.
ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ಸೋಜ(19) ಮೃತಪಟ್ಟ ಯುವತಿ. ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದಳು.