ಉಡುಪಿ: ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ 13-ಕೊಡಿಬೆಟ್ಟು, ಕುಂದಾಪುರ ತಾಲೂಕಿನ 35-ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ ಹಾಗೂ ಕಾರ್ಕಳ ತಾಲೂಕಿನ ಈದು, ನಲ್ಲೂರು, ನಿಟ್ಟೆ, ನೀರೆ, 5-ಕೆರ್ವಾಶೆ ಹಾಗೂ ಕಡ್ತಲ ಗ್ರಾಮ ಪಂಚಾಯತಿಗಳ ಉಪಚುನಾವಣೆಗೆ ಸಂಬಂಧಿಸಿದAತೆ ನವೆಂಬರ್ 23 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ)ರಂತೆ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ಯ ಅಧಿನಿಯಮ 1993 ಪ್ರಕರಣ 308 ಎಸಿ ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ನವೆಂಬರ್ 21 ರ ಸಂಜೆ 5 ಗಂಟೆಯಿಂದ ನ. 23 ರ ಸಂಜೆ 5 ರ ವರೆಗೆ ಈ ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಒಣದಿನ ಎಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ.