Tuesday, December 3, 2024

ನ. 14ರಿಂದ ಉಡುಪಿ ಜಿಲ್ಲೆಯಾದ್ಯಂತ 71ನೇ ಅಖಿಲ ಭಾರತ ಸಹಕಾರ ಸಪ್ತಾಹ; ಜಯಕರ ಶೆಟ್ಟಿ ಇಂದ್ರಾಳಿ

Must read

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಉಡುಪಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ನವೆಂಬರ್ 14ರಿಂದ 20ರವರೆಗೆ ಉಡುಪಿ ಜಿಲ್ಲೆಯಾದ್ಯಂತ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಗಳು ನಡೆಯಲಿವೆ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಸಹಕಾರಿ ಸಪ್ತಾಹದ ಧ್ಯೇಯ ವಾಕ್ಯ “ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ಆಗಿದ್ದು, ಉಡುಪಿ ಜಿಲ್ಲಾ ಸಹಕಾರ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಆಚರಿಸಲಾಗುತ್ತಿದೆ ಎಂದರು.

ನ.14ರಂದು ಬೆಳಿಗ್ಗೆ 10.30ಕ್ಕೆ ಮಂದಾರ್ತಿ ಶ್ರೀ ದುರ್ಗಾ ಸಹಕಾರ ಸೌಧದ ಚಾಮುಂಡೇಶ್ವರಿ ಸಭಾಂಗಣದಲ್ಲಿ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಪ್ತಾಹಕ್ಕೆ ಚಾಲನೆ ನೀಡಲಿದ್ದಾರೆ. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಅದೇ ದಿನ ಬೆಳಿಗ್ಗೆ 9ಗಂಟೆಗೆ ಸಹಕಾರ ಪ್ರಚಾರ ರಥಕ್ಕೆ ಚಾಲನೆ ನೀಡಲಾಗುವುದು ಎಂದರು.

ನ.15ರಂದು ಬೆಳಿಗ್ಗೆ 10.30ಕ್ಕೆ ಕಾರ್ಕಳ ಜೋಡುರಸ್ತೆಯ ರಾಜಾಪುರ ಸಭಾಭವನದಲ್ಲಿ “ಸಹಕಾರ ಸಂಸ್ಥೆಗಳಲ್ಲಿ ಅನ್ವೇಷನೆ, ತಾಂತ್ರಿಕತೆ ಮತ್ತು ಉತ್ತಮ ಆಡಳಿತ” ವಿಷಯದ ಕುರಿತು ಎರಡನೇ ದಿನದ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ದ.ಕ ಜಿಲ್ಲಾ‌ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ‌ ಎಂದು ತಿಳಿಸಿದರು.

ನ.16ಕ್ಕೆ ರಾಜ್ಯಮಟ್ಟದ ಸಪ್ತಾಹ:
ನ. 16ರಂದು ಬೆಳಿಗ್ಗೆ 9ಗಂಟೆಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ “ಉದ್ಯಮ ಶೀಲತೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ವಿಷಯದ ಕುರಿತ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದ್ದು, ಸಹಕಾರ ಸಚಿವ ಕೆ.ಎನ್ ರಾಜಣ್ಣ ಉದ್ಘಾಟಿಸಲಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ವಿವಿಧ ಸಹಕಾರಿ ಸಂಸ್ಥೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದರು.

ನ. 17ರಂದು ಬೆಳಿಗ್ಗೆ 10.30ಕ್ಕೆ ಬೈಂದೂರಿನ ನಾಗೂರು ಕೃಷ್ಣಲಲಿತ ಕಲಾ ಮಂದಿರದಲ್ಲಿ “ಸಹಕಾರಿ ಉದ್ಯಮಗಳಲ್ಲಿ ಪರಿವರ್ತನೆ” ವಿಷಯದ ಕುರಿತ ನಾಲ್ಕನೇ ದಿನದ ಕಾರ್ಯಕ್ರಮ ಜರುಗಲಿದ್ದು, ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವ ಧನ ವಿತರಣೆ ನಡೆಯಲಿದೆ. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನ. 18ರಂದು ಬೆಳಿಗ್ಗೆ 10ಗಂಟೆಗೆ ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ಸಹಕಾರ ಸೌರಭ ಸಭಾಂಗಣದಲ್ಲಿ “ಸಹಕಾರ ಸಂಸ್ಥೆಗಳ ನಡುವೆ ಸಹಕಾರವನ್ನು ಬಲಪಡಿಸುವುದು” ವಿಷಯ ಕುರಿತ ಐದನೇ ದಿನದ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು ಉದ್ಘಾಟಿಸಲಿದ್ದಾರೆ. ನ. 19ರಂದು ಬೆಳಿಗ್ಗೆ 10.30ಕ್ಕೆ ಬೆಳ್ವೆ ವಾಸುಕಿ ಸಭಾಭವನದಲ್ಲಿ “ಮಹಿಳೆಯರು, ಯುವಕರು ಮತ್ತು ಅಬಲವರ್ಗಗಳಿಗಾಗಿ ಸಹಕಾರ ಸಂಸ್ಥೆಗಳು” ವಿಷಯದ ಕುರಿತ ಆರನೇ ದಿನದ ಕಾರ್ಯಕ್ರಮ ನಡೆಯಲಿದೆ ಎಂದರು.

ನ.20ರಂದು ಬೆಳಿಗ್ಗೆ 10ಗಂಟೆಗೆ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘ಉತ್ತಮ ವಿಶ್ವ ನಿರ್ಮಾಣ ಹಾದಿಗಾಗಿ’ ವಿಷಯದ ಕುರಿತ ಏಳನೇ ದಿನದ ಕಾರ್ಯಕ್ರಮ ಹಾಗೂ ಸಪ್ತಾಹದ ಸಮಾರೋಪ ಸಮಾರಂಭ ಜರುಗಲಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ದ.ಕ ಜಿಲ್ಲಾ‌ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ‌ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಯೂನಿಯನ್ ನಿರ್ದೇಶಕರಾದ ಹರೀಶ್ ಕಿಣಿ ಅಲೆವೂರು, ಕಟಪಾಡಿ ಶಂಕರ ಪೂಜಾರಿ, ಶ್ರೀಧರ್ ಪಿ.ಎಸ್., ಸಿಇಒ ಅನುಷಾ ಬಿ. ಕೋಟ್ಯಾನ್ ಇದ್ದರು.

spot_img

More articles

LEAVE A REPLY

Please enter your comment!
Please enter your name here