Tuesday, December 3, 2024

ಉಪಚುನಾವಣೆ: ರಾಜ್ಯದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆ ಗೆಲುವು; ಬಿಜೆಪಿ ಮೈತ್ರಿಗೆ ಮುಖಭಂಗ

Must read

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ‌ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. 25,357 ಮತಗಳ ಅಂತರದಿಂದ ಎನ್ ಡಿಎ ಅಭ್ಯರ್ಥಿ ನಿಖಿಲ್‌ ಅವರನ್ನು ಸೋಲಿಸಿದ್ದಾರೆ.
ಈ ಫಲಿತಾಂಶ ಒಕ್ಕಲಿಗರ ಕೋಟೆಯಲ್ಲಿ ಡಿಕೆ ಸಹೋದರರಿಗೆ ಬಲ ತುಂಬಿದೆ. ಇದುವರೆಗೆ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಹಿಡಿತ ಸಾಧಿಸಿದ್ದ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ತೀವ್ರ ಮುಖಭಂಗವಾಗಿದೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷ ಸೇರಿದ್ದ ಸಿ.ಪಿ.ಯೋಗೇಶ್ವರ್‌ ಅವರು 25,357 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ತಂದೆ ಗೆದ್ದಿದ್ದ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಪುತ್ರ ನಿಖಿಲ್‌ ವಿಫಲರಾಗಿದ್ದಾರೆ.

ಸಂಡೂರು:
ಎಸ್‌ಟಿ ಮೀಸಲು ಕ್ಷೇತ್ರ ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ, ಸಂಸದ ತುಕುರಾಮ್ ಅವರ ಪತ್ನಿ ಅನ್ನಪೂರ್ಣಾ ಅವರು ಜಯಭೇರಿ ಬಾರಿಸಿದ್ದಾರೆ.
ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧದ ಜಿದ್ದಾಜಿದ್ದಿನ ಹೋರಾಟದಲ್ಲಿ 9,105 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಸಂಡೂರಿನಲ್ಲಿ ಒಟ್ಟು 17 ಸುತ್ತಿನ ಮತ ಎಣಿಕೆ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು 88,727 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಹನುಮಂತು ಅವರು 79622 ಮತಗಳನ್ನು ಗಳಿಸಿ ಪರಭಾವಗೊಂಡಿದ್ದಾರೆ.

ಶಿಗ್ಗಾವಿ:
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹಮದ್ ಖಾನ್‌ ಪಠಾಣ ಅವರು 13,448 ಮತಗಳ ಅಂತರದಿಂದ ಮುನ್ನಡೆ ಸಾಧಿಸಿ ಗೆಲುವು ತನ್ನದಾಗಿಸಿಕೊಂಡಿದೆ.
ಕಾಂಗ್ರೆಸ್‌ನ ಯಾಸೀರ ಅಹಮದ್ ಖಾನ್ ಪಠಾಣ ಅವರು 1,00,587 ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರ ಮಗನಾದ ಬಿಜೆಪಿಯ ಅಭ್ಯರ್ಥಿ ಭರತ್‌ ಬೊಮ್ಮಾಯಿ ಅವರು 86,960 ಮತ ಪಡೆದು ಪರಾಭವಗೊಂಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here