ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಮಹಾಯುತಿ ಮೈತ್ರಿಕೂಟ 229 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ರಾಜ್ಯದಲ್ಲಿ ಹೊಸ ದಾಖಲೆಯನ್ನು ಬರೆದಿದೆ. ಕೇವಲ ಮಹಾವಿಕಾಸ್ ಅಘಾಡಿ ತೀವ್ರ ಮುಖಭಂಗ ಅನುಭವಿಸಿದೆ.
ಈ ಬಾರಿಯ ಚುನಾವಣೆಯಲ್ಲಿ ಮತದಾನ ಪ್ರಮಾಣ, ಚುನಾವಣೆ ಫಲಿತಾಂಶ ಎರಡರಲ್ಲೂ ಹೊಸ ದಾಖಲೆಯಾಗಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ 132 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಶಿವಸೇನೆ ಶಿಂಧೆ ಬಣ 53, ಎನ್ ಸಿಪಿ ಅಜಿತ್ ಪವರ್ ಬಣ 40ರಲ್ಲಿ ಹಾಗೂ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮಹಾವಿಕಾಸ್ ಅಘಾಡಿ ಮೈತ್ರಿಕೂಟ ರಚಿಸಿ ಚುನಾವಣೆ ಎದುರಿಸಿದ ಕಾಂಗ್ರೆಸ್ 19 ಕ್ಷೇತ್ರ, ಶಿವಸೇನೆ ಉದ್ದವ್ ಠಾಕ್ರೆ ಬಣ 20 ಕ್ಷೇತ್ರ, ಎನ್ ಸಿಪಿ ಶರದ್ ಪವಾರ್ ಬಣ 11 ಕ್ಷೇತ್ರ ಹಾಗೂ ಇತರರು 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದು, ಹೀನಾಯ ಸೋಲು ಕಂಡಿದೆ.
ಜಾರ್ಖಂಡ್ ನಲ್ಲಿ ಇಂಡಿಯಾಗೆ ಜಯ:
ಜಾರ್ಖಂಡ್ ನಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. 55 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, 81 ಕ್ಷೇತ್ರ ಬಲ ಇರುವ ಜಾರ್ಖಂಡ್ ನಲ್ಲಿ ಅಧಿಕಾರದ ಗದ್ದುಗೆಗೆ ಏರಿದೆ.
ಎನ್ ಡಿಎ ಮೈತ್ರಿಕೂಟ 25 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಅಧಿಕಾರ ಚುಕ್ಕಾಣಿ ಹಿಡಿಯುವ ಪ್ರಯತ್ನ ವಿಫಲವಾಗಿದೆ. ಇತರರು ಒಂದು ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.