Wednesday, February 25, 2026

ಮಣಿಪಾಲ: ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ‌ ಪತ್ತೆ

Must read

ಉಡುಪಿ: ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಶವ‌ ಪತ್ತೆಯಾದ ಘಟನೆ ಮಣಿಪಾಲ ಹೆರ್ಗ ಗ್ರಾಮದ ಸಣ್ಣಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಭಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಕಂಡುಬಂದಿದೆ.

ಮೃತದೇಹ ಗುರುತು ಹಿಡಿಯಲಾಗದಷ್ಟು ಕೊಳೆತು ಹೋಗಿದೆ. ವ್ಯಕ್ತಿ ಮರದ ಕೊಂಬೆಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಶಂಕೆವ್ಯಕ್ತವಾಗಿದೆ. ವ್ಯಕ್ತಿ ಮೃತಪಟ್ಟು 20 ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಮಣಿಪಾಲದ ಪೋಲಿಸ್ ಠಾಣೆಯ ಎ.ಎಸ್.ಐ ನಾಗೇಶ್ ನಾಯ್ಕ್, ಹೆಡ್ ಕಾನ್ಸ್ಟೇಬಲ್ ಸುಧಾಕರ್, ಸಿಬ್ಬಂದಿ ಸಂಗೀತ ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ‌ ಒಳಕಾಡು ನೆರವಾದರು.

spot_img

More articles

LEAVE A REPLY

Please enter your comment!
Please enter your name here