Friday, December 13, 2024

ಕುಂದಾಪುರ: ಕೋಡಿ ಬೀಚ್ ನಲ್ಲಿ ಈಜಲು ಇಳಿದ ಮೂವರು ಸಹೋದರರು ನೀರುಪಾಲು; ಓರ್ವನ‌ ಸ್ಥಿತಿ ಗಂಭೀರ

Must read

ಉಡುಪಿ: ಸಮುದ್ರದಲ್ಲಿ ಈಜಾಡಲು ಹೋಗಿ ಮೂವರು ಯುವಕರು ಸಮುದ್ರ ಪಾಲಾದ ಘಟನೆ ಕುಂದಾಪುರ ಕೋಡಿ ಬೀಚಿನಲ್ಲಿ ಶನಿವಾರ ಸಂಜೆ ನಡೆದಿದೆ.
ಅಂಪಾರು ನಿವಾಸಿ ದಾಮೋದರ್ ಪ್ರಭು ಎಂಬುವರ ಮಗ ಧನರಾಜ್ (23) ಮೃತಪಟ್ಟಿದ್ದಾರೆ. ಇನ್ನೊಬ್ಬ ಮಗ ಧನುಷ್ (20) ಗಂಭೀರ ಸ್ಥಿತಿಯಲ್ಲಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅವರ ಸಹೋದರನ ಪುತ್ರ ದರ್ಶನ್ (18) ಸಮುದ್ರ ಪಾಲಾಗಿದ್ದು ಇದುವರೆಗೆ ಪತ್ತೆ ಆಗಿರುವುದಿಲ್ಲ. ಮೂರು ಜನರು ಸಹೋದರರಾಗಿದ್ದು ಗಂಭೀರ ಸ್ಥಿತಿಯಲ್ಲಿರುವ ಧನುಷ್ ಸುರತ್ಕಲ್‌ ಎನ್‌ಐಟಿಕೆ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಮೂವರು ಸಹೋದರರು ಕುಟುಂಬದ ಜೊತೆ ಸಂಜೆ 6 ಗಂಟೆ ಸುಮಾರಿಗೆ ಕೊಡಿ ಬೀಚಿನಲ್ಲಿ ಈಜಾಡಲು ಬಂದಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರವಾಸಿಗರು ಗಮನಿಸಿ ತಕ್ಷಣ ಸಮುದ್ರಕ್ಕೆ ಹಾರಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಸ್ಥಳೀಯರು ಇಬ್ಬರನ್ನು ಕುಂದಾಪುರದ ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸಿದ್ದಾರೆ. ದರ್ಶನ್ ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಈಜು ತಜ್ಞರು ಅಗ್ನಿಶಾಮಕ ದಳ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here