ಉಡುಪಿ: ಕೆಟ್ಟುನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ರಂದು ಭಾನುವಾರ ಸಂಜೆ ಪರ್ಕಳ ಎಸ್ ಬಿಐ ಬ್ಯಾಂಕ್ ಬಳಿ ಸಂಭವಿಸಿದೆ.
ಮೃತಪಟ್ಟ ಬೈಕ್ ಸವಾರನನ್ನು ಶೆಟ್ಟಿಬೆಟ್ಟು ದೇವು ಪೂಜಾರಿ ಪುತ್ರ ಸೃಜನ್ ಸಾಗರ್(22) ಎಂದು ಗುರುತಿಸಲಾಗಿದೆ. ಟೈಯರ್ ಪಂಚರ್ ಆಗಿ ರಸ್ತೆಯಲ್ಲಿ ನಿಂತಿದ್ದ ನೀರಿನ ಟ್ಯಾಂಕ್ ಗೆ ಬೈಕ್ ಸವಾರ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮಣಿಪಾಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.