Saturday, December 21, 2024

ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ.ರವಿರನ್ನ ಪೊಲೀಸರು ಹೊತ್ತೊಯ್ದಿದ್ದಾರೆ: ಸಂಸದ ಕೋಟ ಕಿಡಿ

Must read

ಉಡುಪಿ: ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಅಂದವರ ಮೇಲೆ ಕ್ರಮ ಕೈಗೊಳ್ಳಿ ಎಂದು ಬಿಜೆಪಿ ಹೇಳಿದಾಗ, ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಸಾಬೀತಾದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ರಾಜ್ಯದ ಕಾಂಗ್ರೆಸ್ ತಳ್ಳಿ ಹಾಕಿತ್ತು. ಆದರೇ ಸಿ.ಟಿ.ರವಿ ಅವರು ವಿಧಾನಪರಿಷತ್‌ ನಲ್ಲಿ ಯಾವುದೇ ಅಶ್ಲೀಲ ಪದ ಬಳಕೆ ಮಾಡುವುದಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಪರಿಶೀಲನೆ ನಡೆಸದೇ, ಅವರನ್ನು ಸುವರ್ಣ ಸೌಧದಲ್ಲಿಯಲ್ಲಿಯೇ ಅಟ್ಟಾಡಿಸಿ ಬಂಧಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಆಡಳಿತ ಸರ್ಕಾರ ವಿಪಕ್ಷವನ್ನು ನಡೆಸಿಕೊಳ್ಳುವ ಈ ರೀತಿ ಸರಿಯಲ್ಲ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವತಃ ಸಿ.ಟಿ. ರವಿ ಅವರೇ ನಾನು ಯಾವುದೇ ಅಶ್ಲೀಲ ಶಬ್ದ ಬಳಸಿಲ್ಲ ಸ್ಪಷ್ಟಪಡಿಸಿದ್ದಾರೆ, ಸಭಾಪತಿಗಳ ಸುಪರ್ದಿಯಲ್ಲಿರುವ ಎಲ್ಲಾ ಕಡತಗಳನ್ನು ತರಿಸಿ, ನಡೆದಿರುವ ವಿದ್ಯಮಾನ, ಆಡಿರುವ ಮಾತು ಪ್ರಯೋಗಾಲಯದಲ್ಲಿ ಪರಿಶೀಲನೆ ಆಗಲಿ, ಆರೋಪ ಸಾಬೀತಾದರೇ ಕ್ರಮ ತೆಗೆದುಕೊಳ್ಳಬೇಕು. ಆದರೆ ಸಾಕ್ಷ್ಯಗಳೇ ಇಲ್ಲದೇ ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ.ರವಿಯನ್ನ ಪೊಲೀಸರು ಹೊತ್ತೊಯ್ದಿದ್ದಾರೆ, ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ, ಅವರ ತಲೆಗೂ ಗಾಯಗಳಾಗಿವೆ, ಈ ಎಲ್ಲಾ ವಿದ್ಯಮಾನಗಳ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ಕೊಡಬೇಕು ಎಂದವರು ಆಗ್ರಹಿಸಿದರು.
ಚಿಕ್ಕಮಗಳೂರಿನಲ್ಲಿ ಪ್ರತಿಭಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷರ ಸಹಿತ ನಾಯಕರನ್ನು ಬಂಧನ ಮಾಡಿದ್ದಾರೆ. ಈ ಬೆಳವಣಿಗೆ ರಾಜ್ಯ ಸರ್ಕಾರಕ್ಕೆ ಗೌರವ, ಶೋಭೆ ತರುವುದಿಲ್ಲ ಎಂದವರು ಹೇಳಿದರು.

ಸದನದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಕಣ್ಣೀರು ಹಾಕಿದ್ದಾರೆ. ಸದನ ಇರುವುದು ಜನಸಾಮಾನ್ಯರ ಸಮಸ್ಯೆಗಳ ಬಗೆಗೆ ಚರ್ಚೆ ಮಾಡುವುದಕ್ಕೆ, ಅಲ್ಲಿ ಯಾವುದೇ ವೈಯಕ್ತಿಕ ಟೀಕೆ ಟಿಪ್ಪಣಿಗಳು ಆಗಬಾರದು, ಏನಾಗಿದೆ ಎಂದು ಪರಿಶೀಲಿಸದೇ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿರುವುದು ಸರಿಯಲ್ಲ, ಯಾರ ಮನಸ್ಸಿಗೂ ನೋವಾಗದಂತೆ ಸತ್ಯದರ್ಶನವಾಗಬೇಕು ಎಂದರು.

spot_img

More articles

LEAVE A REPLY

Please enter your comment!
Please enter your name here