Friday, December 27, 2024

ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ: ಕುಂದಾಪುರ ಬೀಜಾಡಿ ಮೂಲದ ಯೋಧ ಹುತಾತ್ಮ

Must read

ಉಡುಪಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದಲ್ಲಿ ಸೇನಾ ವಾಹನ ಸ್ಕಿಡ್ ಆಗಿ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕರ್ನಾಟಕದ ಮೂವರು ಯೋಧ ಸೇರಿ ಐವರು ಮೃತಪಟ್ಟಿದ್ದು, ಈ ಪೈಕಿ ಓರ್ವ ಯೋಧ ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಅವರು ಹುತಾತ್ಮರಾಗಿದ್ದಾರೆ.

ಬೀಜಾಡಿ ನಿವಾಸಿ ಚಂದು ಪೂಜಾರಿ ಮತ್ತು ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಹುತಾತ್ಮ ಯೋಧ ತಾಯಿ, ಇಬ್ಬರು ಸಹೋದರಿಯರು, ಪತ್ನಿ, ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಡಿ.26ರ ಗುರುವಾರ ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ಕರೆತಂದು ಸಕಲ ವಿಧಿಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ತಿಳಿದುಬಂದಿದೆ.

spot_img

More articles

LEAVE A REPLY

Please enter your comment!
Please enter your name here