ನವದೆಹಲಿ: ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ವಯೋಸಹಜ ಕಾಯಿಲೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇಂದು ರಾತ್ರಿ ನಿಧನ ಹೊಂದಿದರು.
92 ವರ್ಷ ವಯಸ್ಸಿನ ಮನಮೋಹನ್ ಸಿಂಗ್ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ರಾತ್ರಿ ಇಹಲೋಕ ತ್ಯಜಿಸಿದರು.
2004ರಿಂದ 2014ರ ವರೆಗೆ ಭಾರತ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಅದಕ್ಕೂ ಮೊದಲು ಇಂದಿರಾ ಗಾಂಧಿ ಪ್ರಧಾನಿ ಆಗಿದ್ದ ಸಂದರ್ಭದಲ್ಲಿ ಆರ್ಥಿಕ ಸಲಹೆಗಾರರಾಗಿ ಕೆಲಸ ನಿರ್ವಹಿಸಿದ್ದರು. ಅವರು ದೇಶದ ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದರು.