Home ಕರಾವಳಿ ಉಡುಪಿ: ಕಾರಿಗೆ ಕಂಟೈನರ್ ಡಿಕ್ಕಿ: ಕೂದಲೆಳೆಯಂತರದಲ್ಲಿ ಪಾರಾದ ದಂಪತಿ

ಉಡುಪಿ: ಕಾರಿಗೆ ಕಂಟೈನರ್ ಡಿಕ್ಕಿ: ಕೂದಲೆಳೆಯಂತರದಲ್ಲಿ ಪಾರಾದ ದಂಪತಿ

ಉಡುಪಿ: ಕಂಟೈನರ್ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಉದ್ಯಾವರದ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಮಧ್ಯಾಹ್ನ‌ ಸಂಭವಿಸಿದೆ. ಕಾರಿನಲ್ಲಿದ್ದ ದಂಪತಿ ಕೂದಲೆಳೆಯಂತರದಲ್ಲಿ ಪಾರಾಗಿದ್ದಾರೆ.

ಕಾಪು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಸ್ಯಾಂಟ್ರೋ ಕಾರು ಓವರ್ಟೇಕ್ ಮಾಡುವ ಧಾವಂತದಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಈ ಸಂದರ್ಭದಲ್ಲಿ ಹಿಂದಿನಿಂದ ಬರುತ್ತಿದ್ದ ಕಂಟೈನರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ದಂಪತಿ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Exit mobile version