ಉಡುಪಿ: ಜಿಲ್ಲೆಯಲ್ಲಿನ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ ಮತ್ತು ಆದ್ಯತೇತರ ಪಡಿತರ ಚೀಟಿಗಳಿಗೆ ಕುಟುಂಬದ ಸದಸ್ಯರ ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಹೆಸರು ತೆಗೆಯುವ ಬಗ್ಗೆ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜನವರಿ 31ರ ವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.