Wednesday, January 22, 2025

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಮರುನಿರ್ಮಾಣಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ

Must read

ಉಡುಪಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಕ್ಷಣ ಕೆರೆಯ ಮರು ನಿರ್ಮಾಣದ ಕಾಮಗಾರಿ ಆರಂಭ ಮಾಡುವಂತೆ ಸೂಚನೆ ನೀಡಿದರು.

ಕಳೆದ ಮಳೆಗಾಲದಲ್ಲಿ ಕೆರೆ ಕಾಮಗಾರಿ ಹಂತದಲ್ಲೇ ಕುಸಿದ ಹಿನ್ನೆಲೆಯಲ್ಲಿ ಹಿರಿಯ ತಾಂತ್ರಿಕ ಪರಿಣಿತರ ಸಲಹೆಯಂತೆ, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸ್ಥಳೀಯರ ಅಭಿಪ್ರಾಯ ಪಡೆದು ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಮಾಜಿ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ನಗರಸಭಾ ಸದಸ್ಯೆ ಸುಮಿತ್ರಾ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಪ್ರಮುಖರಾದ ದಿನೇಶ್ ಹೆಗ್ಡೆ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here