Monday, January 12, 2026

ಉಡುಪಿಯ ಪ್ರತಿಷ್ಠಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಗೆ ಬಾಂಬ್ ಬೆದರಿಕೆ

Must read

ಉಡುಪಿ: ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇದರಿಂದ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೇಲ್​ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಶ್ವಾನ ದಳ ಶಾಲೆಯ ಮೂಲೆ ಮೂಲೆಯಲ್ಲೂ ಹುಡುಕಾಟ ನಡೆಸಿದ್ದಾರೆ. ಇನ್ನು, ಬಾಂಬ್​ ಬೆದರಿಕೆ ಸಂದೇಶ ವಿಚಾರ ತಿಳಿದ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂಭಾಗ ಜಮಾಯಿಸಿದ್ದಾರೆ. ಇನ್ನು, ಶಾರದಾ ಶಾಲೆಯಲ್ಲಿ ರಾಜ್ಯದ ನಾನಾ ಭಾಗದ ಹಾಗೂ ಅಂತರರಾಜ್ಯದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

spot_img

More articles

LEAVE A REPLY

Please enter your comment!
Please enter your name here