ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಕಾರ್ಕಳ ಬಿಜೆಪಿ ನೇತೃತ್ವದಲ್ಲಿ ಇದೇ ಫೆ.6ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.
ಬೆಲೆ ಏರಿಕೆ, ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸದಿರುವುದು, ಹಿಂದೂ ವಿರೋಧಿ ನೀತಿ, ಕಟ್ಟಡ ಸಾಮಗ್ರಿಗಳ ಪೂರೈಕೆಗೆ ತಡೆ, ರೇಷನ್ ಕಾರ್ಡ್ ರದ್ದತಿ, ಹಾಲಿನ ಸಬ್ಸಿಡಿ ಬಾಕಿ, ಅಕ್ರಮ ಸಕ್ರಮ ಅರ್ಜಿ ತಿರಸ್ಕೃತ, ಏಕ ವಿನ್ಯಾಸ ನಕ್ರೆ 9/11 ಎ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ವಿರುದ್ಧ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.