Thursday, April 16, 2026

ಉಡುಪಿ: ಅಕ್ರಮವಾಗಿ ಕೋಣ ಸಾಗಿಸುತ್ತಿದ್ದ ಪಿಕ್ ಅಪ್ ವಾಹನ ಅಪಘಾತ

Must read

ಉಡುಪಿ: ಅಕ್ರಮವಾಗಿ ಕೋಣ ಸಾಗಿಸುತ್ತಿದ್ದ ಪಿಕ್ ಅಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡುಪಿ ನಗರದ ಅಂಬಾಗಿಲಿನಲ್ಲಿ ಸಂಭವಿಸಿದೆ. ಬೆಳಗಾವಿಯಿಂದ ಮಂಜೇಶ್ವರಕ್ಕೆ ಅಕ್ರಮವಾಗಿ ಪಿಕ್ ಅಪ್ ವಾಹನದಲ್ಲಿ ಕೋಣ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅಪಘಾತಗೊಂಡ ವಾಹನ ಪರಿಶೀಲಿಸಿದಾಗ ಹಿಂಸಾತ್ಮಕವಾಗಿ ಕಟ್ಟಿಹಾಕಿದ್ದ 7 ಕೋಣಗಳು ಪತ್ತೆಯಾಗಿವೆ. ವಾಹನದಲ್ಲಿದ್ದ ಇಬ್ಬರ ಪೈಕಿ ಓರ್ವ ಪರಾರಿಯಾಗಿದ್ದು, ಓರ್ವನನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here