ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೈಮಗ್ಗ ನೇಕಾರ ಸಹಿತ ಎಲ್ಲಾ ಹಿಂದುಳಿದ ವರ್ಗಗಳ ವೃತ್ತಿಗಳಿಗೆ ಅನುಸಾರವಾಗಿ ಅನೇಕ ಜನಪರ ಯೋಜನೆಗಳನ್ನು ಘೋಷಣೆ ಮಾಡಿದೆ. ಇದನ್ನು ಸಂಬಂಧಪಟ್ಟ ಫಲಾನುಭವಿಗಳಿಗೆ ಜಾಗೃತಿ ಮೂಡಿಸಿ ಅನುಷ್ಠಾನಗೊಳಿಸುವುದರಲ್ಲಿ ಸರ್ಕಾರಿ ಅಧಿಕಾರಿಗಳ ಪಾತ್ರ ಮಹತ್ವಪೂರ್ಣವಾಗಿದೆ ಎಂದು ಶಾಸಕರಾದ ಯಶಪಾಲ್ ಸುವರ್ಣ ರವರು ಅಭಿಮತ ವ್ಯಕ್ತಪಡಿಸಿದರು. ಅವರು ಉಡುಪಿ ಕೈಮಗ್ಗ ತರಬೇತಿ ಕೇಂದ್ರದಲ್ಲಿ ಕೇಂದ್ರ ಸರ್ಕಾರದ ಜವಳಿ ಇಲಾಖೆ, ನೇಕಾರ ಸೇವಾ ಕೇಂದ್ರ ಬೆಂಗಳೂರು ಮತ್ತು ಉಡುಪಿ ನೇಕಾರರ ಪ್ರಾಥಮಿಕ ಸೇವಾ ಸಹಕಾರ ಸಂಘ ಇವರ ಜಂಟಿ ಆಶ್ರಯದಲ್ಲಿ ಕೇಂದ್ರ ಸರ್ಕಾರದ ಸಮರ್ಥ್ ಯೋಜನೆಯಡಿಯಲ್ಲಿ ಎರಡನೆಯ ಹಂತದ 45 ದಿನಗಳ ಕೈ ಮಗ್ಗ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಉಡುಪಿ ಪ್ರಾಥಮಿಕ ನೇಕಾರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ರತ್ನಾಕರ್ ಇಂದ್ರಾಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಬೆಂಗಳೂರು ನೇಕಾರ ಸೇವಾ ಕೇಂದ್ರದ ಪ್ರತಿನಿಧಿ ತುಳಸಿ ರಾಮನ್ ಪ್ರಾಸ್ತಾಕವಿಕವಾಗಿ ಮಾತನಾಡಿದರು.
ದಕ್ಷಿಣ ಕನ್ನಡ ಪದ್ಮಶಾಲಿ ಮಹಾಸಭದ ಪ್ರಧಾನ ಕಾರ್ಯದರ್ಶಿ ಡಾ. ವೆಂಕಟ್ರಾಯ ಶೆಟ್ಟಿಗಾರ್, ನೇಕಾರ ವೇದಿಕೆ ಸಂಚಾಲಕರಾದ ಪ್ರೇಮಾನಂದ ಶೆಟ್ಟಿಗಾರ್. ಉಡುಪಿ ಪ್ರಾಥಮಿಕ ನೇಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಕುಮಾರ್, ಕೈಮಗ್ಗ ತರಬೇತಿ ಕೇಂದ್ರದ ಸಂಚಾಲಕರಾದ ಕೇಶವ ಶೆಟ್ಟಿಗಾರ್ ಮತ್ತು ದೇವರಾಯ ಶೆಟ್ಟಿಗಾರ್, ಉಡುಪಿ ಜಿಲ್ಲಾ ನೇಕಾರರ ಒಕ್ಕೂಟದ ಮಹಿಳಾ ಘಟಕದ ಸಂಚಾಲಕಿ ಶ್ರೀಮತಿ ಶೋಭಾ ಜ್ಯೋತಿಪ್ರಸಾದ್ ಕಿನ್ನಿಮುಲ್ಕಿ ಮತ್ತಿತರರು ಉಪಸ್ಥಿತರಿದ್ದರು. ಉಡುಪಿ ನಗರಸಭಾ ಸದಸ್ಯರಾದ ಮಂಜುನಾಥ್ ಮಣಿಪಾಲ ಕಾರ್ಯ ಕಾರ್ಯಕ್ರಮ. ನಿರೂಪಿಸಿದರು.

