Thursday, April 23, 2026

ಪರ್ಕಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ವ್ಯಕ್ತಿ‌ ಸ್ಥಳದಲ್ಲೇ ಮೃತ್ಯು

Must read

ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ‌ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ಶನಿವಾರ ಸಂಭವಿಸಿದೆ.

ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದ ಜಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದರು. ಕಾರು ಇಳಿದು ಬೀಡ ತೆಗೆದುಕೊಳ್ಳಲು ಪಕ್ಕದ ರಸ್ತೆಯಲ್ಲಿರುವ ಅಂಗಡಿಗೆ ತೆರಳುತ್ತಿದ್ದ ವೇಳೆ ವೇಗವಾಗಿ‌ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಅತಿ ವೇಗದಲ್ಲಿದ್ದ ಪರಿಣಾಮ ರಮೇಶ್ ನಾಯಕ್ ಅವರನ್ನು ಸುಮಾರು ದೂರ ರಸ್ತೆಯಲ್ಲೇ ಎಳೆದುಕೊಂಡು ಹೋಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಮೇಶ್ ಅವರು‌ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

spot_img

More articles

LEAVE A REPLY

Please enter your comment!
Please enter your name here