Friday, January 9, 2026

ಮಲ್ಪೆ: ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶಿ ಬೋಟ್ ವಶ; ಮೂವರು ಮೀನುಗಾರರ ಬಂಧನ

Must read

ಉಡುಪಿ: ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶಿ ಬೋಟನ್ನು ಕರಾವಳಿ ಕಾವಲು ಪೊಲೀಸ್(ಸಿಎಸ್ಪಿ) ಹಾಗೂ ಮಂಗಳೂರು ಕೋಸ್ಟ್ ಗಾರ್ಡ್ ವಶಕ್ಕೆ ಪಡೆದುಕೊಂಡ ಘಟನೆ ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ನಡೆದಿದೆ. ಬೋಟ್ ನಲ್ಲಿದ್ದ ಮೂವರು ತಮಿಳುನಾಡು ಮೂಲದ ಮೀನುಗಾರರನ್ನು ಬಂಧಿಸಲಾಗಿದೆ.

ಬಂಧಿತರನ್ನು ಭಾರತೀಯ ಮೂಲದ ತಮಿಳುನಾಡು ನಿವಾಸಿಗಳೆನ್ನಲಾದ ಜೇಮ್ಸ್ ಫ್ರಾಂಕ್ಲಿನ್(50), ರಾಬಿನ್ ಸ್ಟನ್(50), ಡಿರೋಸ್ ಅಲ್ಫೋನ್ಸ್(38) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಫೆ.17ರಂದು ಒಮಾನ್ ದೇಶದ ದುಕಮ್ ಮೀನುಗಾರಿಕಾ ಬಂದರಿನಿಂದ ಹೊರಟ ಈ ಬೋಟ್ ಕಾರವಾರ ಮೂಲಕ ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಕಡೆಗೆ ಬರುತ್ತಿತ್ತು. ಈ ಬಗ್ಗೆ ಮಲ್ಪೆ ಸಿಎಸ್ಪಿ ಠಾಣೆಗೆ ಬಂದ ಖಚಿತ ಮಾಹಿತಿಯ ಮೇರೆಗೆ ಮಲ್ಪೆಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಫೆ.23ರಂದು ಸೈಂಟ್ ಮೇರಿಸ್ ದ್ವೀಪದ ಪರಿಸರದಲ್ಲಿ ತಪಾಸಣೆ ನಡೆಸಿ, ಮಂಗಳೂರು ಕೋಸ್ಟ್ ಗಾರ್ಡ್ ಅಧಿಕಾರಿ ಹಾಗೂ ಸಿಬ್ಬಂದಿಯ ಸಹಕಾರದೊಂದಿಗೆ ಬೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಮೀನುಗಾರಿಕಾ ಬೋಟು ಒಮಾನ್ ದೇಶಕ್ಕೆ ಸೇರಿದ್ದು, ಇದರಲ್ಲಿದ್ದ 3 ಜನರನ್ನು ವಶಕ್ಕೆ ಪಡೆಯಲಾಗಿದೆ. ಈ ಮೀನುಗಾರಿಕಾ ಬೋಟನ್ನು ಇಂಡಿಯನ್ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್, ಕೇಂದ್ರ ಗುಪ್ತಚರ ದಳ, ಕಸ್ಟಮ್ಸ್, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಜಂಟಿ ಪರಿಶೀಲನೆ ನಡೆಸಿದ್ದು, ಇದರಲ್ಲಿ ಯಾವುದೇ ಸಂಶಯಾಸ್ಪದ ವಸ್ತುಗಳು ದೊರೆತಿರುವುದಿಲ್ಲ ಎಂದು ತಿಳಿದುಬಂದಿದೆ.

spot_img

More articles

LEAVE A REPLY

Please enter your comment!
Please enter your name here