ಉಡುಪಿ: ಕಳೆದ ಕೆಲವು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕಿದೆಬೆಟ್ಟು ದಿಗಂತ್ ಕೊನೆಗೂ ಪತ್ತೆಯಾಗಿದ್ದಾರೆ.
ಇಂದು ಉಡುಪಿಯ ಡಿ ಮಾರ್ಟ್ ಸಮೀಪ ಮಂಗಳೂರಿನ ದಿಗಂತ್ ಪತ್ತೆಯಾಗಿದ್ದಾನೆ. ಡಿ ಮಾರ್ಟ್ ಒಳಗೆ ಬಟ್ಟೆಗಳನ್ನು ಬ್ಯಾಗ್‌ಗೆ ತುಂಬಿಸಿಕೊಳ್ಳುತ್ತಿದ್ದಾಗ ದಿಗಂತ್ ಚಲನವಲನ ಕಂಡು ಸಂಶಯಗೊಂಡ ಸಿಬ್ಬಂದಿ ವಿಚಾರಿಸಿದ್ದಾರೆ. ಡಿ ಮಾರ್ಟ್ ಸಿಬ್ಬಂದಿ ವಿಚಾರಣೆ ನಡೆಸುವಾಗ ತಾನು ದಿಗಂತ್ ಎಂದು ಯುವಕ ಹೇಳಿಕೊಂಡಿದ್ದಾನೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ನಂತರ ಪೊಲೀಸರು ದಿಗಂತ್‌ನನ್ನ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಾಪತ್ತೆ ಪ್ರಕರಣದ ಹಿಂದೆ ಅನೇಕ ಊಹಾಪೋಹಗಳು ಹರಿದಾಡಿತ್ತು. ಇದೀಗ ಕೊನೆಗೂ ದಿಗಂತ್‌ನನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

