ಚೆನ್ನೈ: ಅಚ್ಚರಿಯ ಬೆಳವಣಿಗೆಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ. ಅಣ್ಣಾಮಲೈ ರಾಜೀನಾಮೆ ನೀಡೋದಾಗಿ ಘೋಷಿಸಿದ್ದಾರೆ.
ಈ ಬಗ್ಗೆ ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾವುದೇ ಸ್ಪರ್ಧೆ ಇಲ್ಲ. ರಾಜ್ಯ ನಾಯಕತ್ವದಿಂದ ಹಿಂದೆ ಸರಿದಿದ್ದೇನೆ. ನಾವೆಲ್ಲ ಸೇರಿ ಸರ್ವಾನುಮತದಿಂದ ರಾಜ್ಯ ನಾಯಕರನ್ನು ಆಯ್ಕೆ ಮಾಡುತ್ತೇವೆ. ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕು. ಸದ್ಯಕ್ಕೆ ರಾಜ್ಯ ನಾಯಕತ್ವದ ರೇಸ್‌ನಲ್ಲಿ ನಾನಿಲ್ಲ ಎಂದು ಹೇಳಿದ್ದಾರೆ.
