ಉಡುಪಿ: ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಇದರ ವತಿಯಿಂದ ಎರಡು ದಿನಗಳ ಜೇನು ಕೃಷಿ ತರಬೇತಿ ಕಾರ್ಯಾಗಾರವನ್ನು ನಗರದಲ್ಲಿ ಆಯೋಜಿಸಲಾಯಿತು.
ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ ಶಿಬಿರಾರ್ಥಿಗಳಿಗೆ ಕಾರ್ಯಗಾರದ ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.
ಸಮಾರಂಭದಲ್ಲಿ ನಗರಸಭಾ ಸದಸ್ಯ ಪ್ರಭಾಕರ ಪೂಜಾರಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ ಮೊದಲಾದವರು ಉಪಸ್ಥಿತರಿದ್ದರು.