Friday, September 13, 2024

ಮಣಿಪಾಲ:ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

Must read

ಮಣಿಪಾಲ: ವಿಶ್ವ ಹೃದಯ ದಿನದ ಅಂಗವಾಗಿ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಾಹೆ ಮಣಿಪಾಲದ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಮಣಿಪಾಲದ ರಜತಾದ್ರಿಯ ಡಿಸಿ ಕಚೇರಿ ಮತ್ತು ಇತರ ಕಚೇರಿಗಳ ಸರಕಾರಿ ನೌಕರರಿಗೆ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರವನ್ನು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಆಯೋಜಿಸಲಾಗಿತ್ತು.

ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರೋಗ್ಯದ ಕುರಿತು ಯಾರೂ ಕೂಡ ಅಸಡ್ಡೆ ತೋರಬಾರದು. ನಿತ್ಯವೂ ಕನಿಷ್ಠ ವ್ಯಾಯಾಮ ಮಾಡಬೇಕು . ಸಮತೋಲಿತ ಆಹಾರ ಸೇವಿಸಬೇಕು. ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ಅರಿವು ಜಾಗೃತಿ ಅಗತ್ಯ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್. ಮಾತನಾಡಿ, ವರ್ಷಕೊಮ್ಮೆ ಅರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರ ಮೂಲಕ ತಾವು ಆರೋಗ್ಯವಂತರಾಗಿದ್ದೇವೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದರು.

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಪಂಚಾಯತ್ ಸಿ ಪಿ ಓ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಸ್ವಾಗತಿಸಿದರು. ಸಮುದಾಯ ಆರೋಗ್ಯ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಅಶ್ವಿನಿ ಕುಮಾರ್ ವಂದಿಸಿದರು. ವಿಭಾಗದ ಡಾ ಆಫ್ರೋಜ್ ಕಾರ್ಯಕ್ರಮ ನಿರೂಪಿಸಿದರು.

spot_img

More articles

LEAVE A REPLY

Please enter your comment!
Please enter your name here