Home ಕರಾವಳಿ ಕಾರ್ಕಳ: ಗುಂಡು ಹಾರಿಸಿಕೊಂಡು ಉದ್ಯಮಿ‌ ಆತ್ಮಹತ್ಯೆ

ಕಾರ್ಕಳ: ಗುಂಡು ಹಾರಿಸಿಕೊಂಡು ಉದ್ಯಮಿ‌ ಆತ್ಮಹತ್ಯೆ

ಉಡುಪಿ: ಕಾರಿನೊಳಗೆ ಕುಳಿತುಕೊಂಡು ಸ್ವಯಂ ತಾನೆ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.29ರ ಮುಂಜಾನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆಯಲ್ಲಿ ಸಂಭವಿಸಿದೆ.
ಮೂಲತಃ ಕಾರ್ಕಳದವರಾದ ಮಂಗಳೂರು ನಿವಾಸಿ ಉದ್ಯಮಿ ದಿಲೀಪ್ ಎನ್. ಆರ್. ಆತ್ಮಹತ್ಯೆಗೆ ಶರಣಾದ ಉದ್ಯಮಿ. ಮಂಗಳೂರಿನಲ್ಲಿ ವಾಸವಿದ್ದ ಅವರು ನಿನ್ನೆ ರಾತ್ರಿ ಕಾರಿನಲ್ಲಿ ಕಾರ್ಕಳಕ್ಕೆ ಹೊರಟ್ಟಿದ್ದರು. ನಿಟ್ಟೆ ದೂಪಕಟ್ಟೆಯ ನವೋದಯ ಪ್ರಾಪರ್ಟಿಸ್ ಮುಂಭಾಗ ಕಾರಿನಲ್ಲೇ ವಿಷ ಸೇವಿಸಿ ತಮ್ಮಲ್ಲಿದ್ದ ಗನ್ ಮೂಲಕ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇವರು ಕಾರ್ಕಳ ಪುರಸಭೆ ಸದಸ್ಯ ಸುಭೀತ್ ಎನ್.ಆರ್. ಅವರ ಸಹೋದರ. ಆರ್ಥಿಕ ಮುಗ್ಗಟ್ಟು ಮತ್ತು ಆರೋಗ್ಯ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

Exit mobile version