Home ಆರೋಗ್ಯ ಭಾಗ್ಯ ಮಣಿಪಾಲ: ಹೃದಯ ಆರೋಗ್ಯ ಜಾಗೃತಿ ಕಲಾಶಿಲ್ಪ ಅನಾವರಣ

ಮಣಿಪಾಲ: ಹೃದಯ ಆರೋಗ್ಯ ಜಾಗೃತಿ ಕಲಾಶಿಲ್ಪ ಅನಾವರಣ

ಮಣಿಪಾಲ: ವಿಶ್ವ ಹೃದಯ ದಿನದ ಅಂಗವಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾಹೆಯ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಅವರು ಹೃದಯ ಆರೋಗ್ಯ ಜಾಗೃತಿ ಕಲಾ ಶಿಲ್ಪವನ್ನು ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಡಾ. ಅವಿನಾಶ ಶೆಟ್ಟಿ ಅವರು, ಹೃದಯ ಆರೋಗ್ಯ ಕಾಪಾಡುವಲ್ಲಿ ಸಮತೋಲಿತ ಆಹಾರ ಮತ್ತು ನಿತ್ಯ ವ್ಯಾಯಾಮದ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ ಪದ್ಮಕುಮಾರ್ , ಹೃದ್ರೋಗ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಗಣೇಶ್ ಕಾಮತ್, ಡಾ ಗುರುಪ್ರಸಾದ್ ರೈ , ಡಾ ಕೀರ್ತಿನಾಥ ಬಲ್ಲಾಳ, ಸಚಿನ್ ಕಾರಂತ್, ಮೋಹನ್ ಶೆಟ್ಟಿ ಉಪಸ್ಥಿತರಿದ್ದರು.

ಕಲಾವಿದರಾದ ಶ್ರೀನಾಥ್ ಮಣಿಪಾಲ ಮತ್ತು ರವಿ ಹಿರೇಬೆಟ್ಟು ಪರಿಸರ ಸ್ನೇಹಿ ವಸ್ತುಗಳಿಂದ ಶಿಲ್ಪವನ್ನು ತಯಾರಿಸಿದ್ದರು. ಕೃಷ್ಣಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Exit mobile version