Wednesday, April 15, 2026

ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಮಟ್ಟಹಾಕಲು ಪ್ರಯತ್ನಿಸುತ್ತಿದೆ: ಸಂಸದ ಕೋಟ ಆರೋಪ

Must read

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಿಂದುತ್ವಕ್ಕಾಗಿ ಕೆಲಸ ಮಾಡಿದವರನ್ನು ಗಡಿಪಾರು ಮಾಡುವ ಹಾಗೂ ಎಫ್‌ಐಆರ್ ದಾಖಲಿಸುವ ಪ್ರಯತ್ನವನ್ನು ಮಾಡುತ್ತಿದೆ. ಸಿದ್ಧರಾಮಯ್ಯ ಸರಕಾರದ ನಿರ್ದೇಶನದ ಮೇರೆಗೆ ಪೊಲೀಸರು ಈ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಭಾವನೆ ವ್ಯಕ್ತಪಡಿಸಿದ, ಕಾರ್ಯಕ್ರಮಗಳಲ್ಲಿ ಭಾಷಣ ಮಾಡಿದ ಹಿಂದೂ ಸಂಘಟನೆಗಳ ಪ್ರಮುಖರಿಗೆ ನೋಟೀಸ್ ನೀಡುವ ಮೂಲಕ ಸರಕಾರ ದಬ್ಬಾಳಿಕೆ ನಡೆಸುತ್ತಿದೆ. ಹಿಂದುತ್ವದ ಬಗ್ಗೆ ಮಾತನಾಡುವವರನ್ನು ವ್ಯವಸ್ಥಿತವಾಗಿ ಮಟ್ಟಹಾಕುವ ಪ್ರಯತ್ನ ನಡೆಸಲಾಗುತ್ತಿದೆ. ಹಿಂದೂಗಳನ್ನು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬೆದರಿಸುವ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ದೂರಿದರು.

ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಶ್ರೀಕಾಂತ್ ಶೆಟ್ಟಿ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಎಲ್ಲ ಪ್ರಕ್ರಿಯೆ ಗಮನಿಸಿದರೆ ಇದು ಔರಂಗಜೇಬನ ತುಘಲಕ್ ದರ್ಬಾರ್‌ನಂತೆ ಕಾಣುತ್ತಿದೆ. ಈ ದರ್ಬಾರ್ ಹೆಚ್ಚು ದಿನ ನಡೆಯುವುದಿಲ್ಲ. ಒಟ್ಟಾರೆ ಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ಹಿಂದುಗಳಿಗೆ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಇಲ್ಲಿ ಅವಕಾಶ ಇಲ್ಲವಾಗಿದೆ. ಇದನ್ನು ಸರಕಾರ ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಇದರ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ವಿಜಯ ಕುಮಾರ್ ಉದ್ಯಾವರ, ಗಿರೀಶ್ ಅಂಚನ್, ಶ್ರೀನಿಧಿ ಹೆಗ್ಡೆ, ದಿನೇಶ್ ಅಮೀನ್, ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here