Wednesday, April 15, 2026

ಕಪ್ ಗೆದ್ದು ಬೆಂಗಳೂರಿಗೆ ಕಾಲಿಟ್ಟ ಆರ್ ಸಿಬಿ; ಭವ್ಯ ಸ್ವಾಗತ

Must read

ಬೆಂಗಳೂರು: 18 ವರ್ಷಗಳ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೊಚ್ಚಲ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರೂರು ಬೆಂಗಳೂರಿಗೆ ಆಮಿಸಿತು.
ತವರಿಗೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭವ್ಯ ಸ್ವಾಗತ ಕೋರಿದ್ದಾರೆ. ವಿಮಾನ ನಿಲ್ದಾಣಕ್ಕೆ ತೆರಳಿದ ಡಿ.ಕೆ.ಶಿವಕುಮಾರ್, ಹೂಗುಚ್ಛ ನೀಡಿ ಆಟಗಾರರನ್ನು ಬರಮಾಡಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಡಿಕೆಶಿ, ವೆಲ್‌ಕಮ್ ಬಾಯ್ಸ್, 18 ವರ್ಷಗಳ ಕನಸನ್ನು 18ನೇ ಐಪಿಎಲ್ ಆವೃತ್ತಿಯಲ್ಲಿ ನನಸು ಮಾಡಿ, ನಮ್ಮ ಹುಡುಗ್ರು ತವರಿನ ಅಂಗಳಕ್ಕೆ ವಾಪಸ್ಸಾಗಿದ್ದಾರೆ. ಈ ಶುಭ ಸಂದರ್ಭದಲ್ಲಿ, ಇತಿಹಾಸ ಸೃಷ್ಟಿಸಿದ ಆರ್‌ಸಿಬಿ ತಂಡಕ್ಕೆ ಕರ್ನಾಟಕದ ಮಣ್ಣಿನಿಂದ ಪ್ರೀತಿಯ, ಭವ್ಯ ಸ್ವಾಗತ! ಎಂದು ಹೇಳಿದ್ದಾರೆ.
ಕೆಲವೇ ಹೊತ್ತಿನಲ್ಲಿ ವಿಧಾನಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿಕುಮಾರ್ ಸನ್ಮಾನಿಸಲಿದ್ದಾರೆ. ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿರುವ ಅಭಿಮಾನಿಗಳ ಮುಂದೆ ಸಂಭ್ರಮಾಚರಣೆ ನಡೆಯಲಿದೆ.

spot_img

More articles

LEAVE A REPLY

Please enter your comment!
Please enter your name here