ಹೊಸದಿಲ್ಲಿ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಸಂಬಂಧ ಪೊಲೀಸರು ಒಟ್ಟು 12 ಆರೋಪಿಗಳನ್ನು ಬಂಧಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಮತ್ತು ವಿಶ್ವ ಹಿಂದೂ ಪರಿಷತ್ ಬಜರಂಗದಳದ ನಾಯಕರು ಮತ್ತು ಕಾರ್ಯಕರ್ತರು ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ: ಕೇಂದ್ರ ಗೃಹ ಸಚಿವಾಲಯ ಆದೇಶ
More articles

