Saturday, March 21, 2026

ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್ ಗೆ ಹುಸಿ ಬಾಂಬ್ ಬೆದರಿಕೆ; ಪೊಲೀಸರಿಂದ ಪರಿಶೀಲನೆ

Must read

ಉಡುಪಿ: ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ನಲ್ಲಿ ಬೆದರಿಕೆ ಹಾಕಿದ ಘಟನೆ ನಡೆದಿದೆ.
ಶಾಲೆಗೆ ಈ ಬಗ್ಗೆ ಇಮೇಲ್ ಬಂದಿದ್ದು, ತಕ್ಷಣ ಪೊಲೀಸರಿಗೆ ವಿಷಯ ತಿಳಿಸಲಾಯಿತು. ಸ್ಥಳಕ್ಕೆ ಧಾವಿಸಿದ ಉಡುಪಿ ನಗರ ಪೊಲೀಸರು ಇಡೀ ಶಾಲೆಯನ್ನು ಸುಪರ್ದಿಗೆ ಪಡೆದು Anti Sabotage Team, ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಿದರು. ಆದರೆ ಯಾವುದೇ ರೀತಿಯ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ಇದೊಂದು ಹುಸಿ ಇ-ಮೇಲ್ ಬೆದರಿಕೆ ಕರೆ ಆಗಿರುವುದರಿಂದ, ಇಡೀ ಶಾಲೆಯನ್ನು ಪರಿಶೀಲಿಸಿ, ಆಡಳಿತ ಮಂಡಳಿಗೆ ಬಿಟ್ಟುಕೊಡಲಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here