Monday, April 20, 2026

ಬೈಂದೂರು: ತಾಯಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿ ಬಂಧನ

Must read

ಉಡುಪಿ: ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ತಾಯಿಯ ಕೊಲೆ ಪ್ರಕರಣದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಮೆಲ್ವಿನ್ (38) ಬಂಧಿತ ಕೊಲೆ ಆರೋಪಿ. ಈತ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿಯಾಗಿದ್ದಾನೆ. ಬೈಂದೂರು ಠಾಣೆ ವ್ಯಾಪ್ತಿಯ ಕಾಲೊಡು ಬ್ಯಾತಿಯಾನಿ ಎಂಬಲ್ಲಿ ಈತ ತಲೆಮರೆಸಿಕೊಂಡಿದ್ದ. ಕೇರಳ ಪೊಲೀಸರ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಿ ಮಂಜೇಶ್ವರ ಪೊಲೀಸ್‌ ಠಾಣೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಬೈಂದೂರು ಪಿಎಸ್ ಐ ತಿಮ್ಮೇಶ್ ಬಿ.ಏನ್ ಕೊಲ್ಲೂರು ಪಿಎಸ್‌ಐ ವಿನಯ್. ಕೆ ಹಾಗೂ ಸಿಬ್ಬಂದಿಗಳಾದ ನಾಗೇಂದ್ರ, ಪರಯ್ಯ ಮಠಪತಿ ಮಾಳಪ್ಪ ದೇಸಾಯಿ ಚಿದಾನಂದ ಪಾಲ್ಗೊಂಡಿದ್ದರು.

spot_img

More articles

LEAVE A REPLY

Please enter your comment!
Please enter your name here