Home ಕ್ರೀಡೆ ಉಡುಪಿ: ನಶಾ ಮುಕ್ತ ದೌಡ್ 25 ಕಿ.ಮೀ ಮ್ಯಾರಥಾನ್ ಓಟಕ್ಕೆ ಚಾಲನೆ

ಉಡುಪಿ: ನಶಾ ಮುಕ್ತ ದೌಡ್ 25 ಕಿ.ಮೀ ಮ್ಯಾರಥಾನ್ ಓಟಕ್ಕೆ ಚಾಲನೆ

ಉಡುಪಿ: ಯುವ ಸಮುದಾಯಕ್ಕೆ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸಲು ಟೀಮ್ ನೇಶನ್ ಫಸ್ಟ್ ಉಡುಪಿ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆಯೋಜಿಸಿದ ‘ನಶಾ ಮುಕ್ತ ದೌಡ್’ 25 ಕಿ.ಮೀ. ಮ್ಯಾರಥಾನ್ ಓಟಕ್ಕೆ ಅಜ್ಜರಕಾಡು ಹುತಾತ್ಮ ಸೈನಿಕರ ಯುದ್ಧ ಸ್ಮಾರಕದ ಬಳಿ ಇಂದು ಚಾಲನೆ ನೀಡಲಾಯಿತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್, ಉದ್ಯಮಿ ಪುರುಷೋತ್ತಮ್ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಡಿವೈಎಸ್ಪಿ ದಿನಕರ್, ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ್ ಉಪಸ್ಥಿತರಿದ್ದರು.

Exit mobile version