ಬೆಂಗಳೂರು: ನಟ ನಾಗಭೂಷಣ್ ಅವರ ಕಾರು ಢಿಕ್ಕಿ ಹೊಡೆದು ಪಾದಚಾರಿ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಿನ್ನೆ ರಾತ್ರಿ ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿ ನಡೆದಿದೆ.
ಮೃತಮಹಿಳೆಯನ್ನು ಪ್ರೇಮಾ ಎಸ್( 48) ಎಂದು ಗುರುತಿಸಲಾಗಿದೆ. ಪ್ರೇಮಾ ಹಾಗೂ ಆಕೆಯ ಪತಿ ಕೃಷ್ಣ ಬಿ. ಅವರು ಮನೆಯ ಬಳಿಯ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ರಭಸವಾಗಿ ಬಂದ ನಾಗಭೂಷಣ್ ಅವರ ಕಾರು ದಂಪತಿಗೆ ಢಿಕ್ಕಿ ಹೊಡೆದಿದೆ.
ಇದರ ಪರಿಣಾಮ ತಲೆಗೆ ತೀವ್ರಗಾಯಗೊಂಡ ಪ್ರೇಮಾ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಪತಿ ಕೃಷ್ಣ ಬಿ. ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಭೂಷಣ್ ನನ್ನು ಪೊಲೀಸರು ಬಂಧಿಸಿದ್ದಾರೆ.