ಹೊಸದಿಲ್ಲಿ: ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಅ.1ರಂದು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ದರವನ್ನು 209 ರೂ.ಗಳಷ್ಟು ಹೆಚ್ಚಿಸಿವೆ.
ವಾಣಿಜ್ಯ ಮತ್ತು ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯು ಪ್ರತಿ ತಿಂಗಳ ಮೊದಲ ದಿನದಂದು ಮಾಸಿಕ ಪರಿಷ್ಕರಣೆಗಳಿಗೆ ಒಳಗಾಗುತ್ತದೆ. ಹೀಗಾಗಿ ಬದಲಾದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಂದಿನಿಂದಲೇ ಜಾರಿಗೆ ಬರಲಿದೆ.
ದೇಶದ ಪ್ರಮುಖ ನಗರಗಳಲ್ಲಿ ನೂತನ ದರ ಹೀಗಿವೆ:
ದೆಹಲಿ- 1,731.50 ರೂ
ಮುಂಬೈ – 1684 ರೂ
ಲಕ್ನೋ- 1,845 ರೂ
ಚೆನ್ನೈ- 1,898 ರೂ
ಬೆಂಗಳೂರು- 1,813 ರೂ
ಕೋಲ್ಕತ್ತಾ – 1839 ರೂ